ಬ್ರಹ್ಮಾವರ, ಫೆ.16 (DaijiworldNews/PY): ಫಾಸ್ಟ್ಯಾಗ್ ಅನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದಂತೆ ಫೆ.16ರ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಸಾಸ್ತಾನದಲ್ಲಿರುವ ಟೋಲ್ ಗೇಟ್ನಲ್ಲಿ ಸ್ಥಳೀಯರಿಗೂ ಕೂಡಾ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.


















ಟೋಲ್ ಗೇಟ್ ಶುಲ್ಕವನ್ನು ಪಾವತಿಸುವುರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಟೋಲ್ ಗೇಟ್ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯು ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ಬಳಿ ಕುಳಿತು ಘೋಷಣೆ ಕೂಗುತ್ತಿದ್ದಾರೆ. ಹೆದ್ದಾರಿ ಹೋರಾಟ ಸಮಿತಿ ನೇತೃತ್ವದ ಈ ಆಂದೋಲನದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜನರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದರಿಂದ, ಜನರ ಅಹವಾಲನ್ನು ಆಲಿಸಲು ತೀರ್ಮಾನಿಸಿದೆ. ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಆದ ಕಾರಣ ಟೋಲ್ ಶುಲ್ಕವನ್ನು ಪಾವತಿಸದೇ ಪ್ರತಿಭಟನಾಕಾರರಿಗೆ ಹೋಗಲು ಅವಕಾಶ ನೀಡಲಾಯಿತು.