ಬೆಳ್ತಂಗಡಿ, ಫೆ.16 (DaijiworldNews/MB) : ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ (20) ಅವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.



ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲು ಬೇಕಾದ ಯಂತ್ರಗಳನ್ನು ಬಳಸಲು ಸರಿಯಾದ ವಾತಾವರಣವಿಲ್ಲದ ಕಾರಣ ಹಲವು ಸಮಯದವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಕಲ್ಲು ಬಂಡೆಯಡಿ ಮೃತದೇಹ ಲಭ್ಯವಾಗಿದೆ.
ಮೃತ ದೇಹ ಪತ್ತೆ ಕಾರ್ಯದಲ್ಲಿ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಕಂದಾಯ ಇಲಾಖೆ, ಸ್ಥಳೀಯ ಗ್ರಾ.ಪಂ, ಎನ್ಡಿಆರ್ಎಫ್ ತಂಡ, ಮಹೇಶ್ ಶೆಟ್ಟಿ ತಿಮರೋಡಿ ಅವರ ನೇತೃತ್ವದ ತಂಡ ಹಾಗೂ ಸ್ಥಳೀಯರು ಭಾಗಿಯಾಗಿದ್ದರು.