ಉಡುಪಿ, ಫೆ. 16 (DaijiworldNews/SM): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ ಉಡುಪಿ, ಬೈಂದೂರು ಪೊಲೀಸ್ ಠಾಣೆ, ಉಪ್ಪುಂದ ಗ್ರಾಮ ಪಂಚಾಯತ್ ಜಂಟಿ ಕಾರ್ಯಾಚರಣೆ ನಡೆಸಿ ಆರು ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಿರುವ ಘಟನೆ ನಡೆದಿದೆ.

5 ಗಂಡು ಮಕ್ಕಳು ಹಾಗೂ 1 ಹೆಣ್ಣು ಮಗು ಸೇರಿದಂತೆ ಒಟ್ಟು 6 ಮಕ್ಕಳನ್ನು ರಕ್ಷಿಸಲಾಗಿದೆ. ಮಾರಿಯಮ್ಮನ ಮೂರ್ತಿ ಹೊತ್ತು ಭಿಕ್ಷಾಟನೆ ಮಾಡುತ್ತಿದ್ದ ಹಾವೇರಿ ಮೂಲದ ಮಹಿಳೆ ಯೊಂದಿಗೆ 6 ವರ್ಷದ ಬಾಲಕ ತಾಯಿ ಸಾಮಾಗ್ರಿ ತೆಗೆದು ಕೊಟ್ಟಿಲ್ಲವೆಂದು ಆತ ಬೇರೆಯೇ ಭಿಕ್ಷೆ ಬೇಡಿಕೊಂಡಿದ್ದ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಇನ್ನು ಬಾಲಕಾರ್ಮಿಕ ಪದ್ಧತಿ ಮತ್ತು ಭಿಕ್ಷಾಟನೆ ಬಗ್ಗೆ ಅರಿವು ನೀಡಿ ಮಕ್ಕಳನ್ನು ರಕ್ಷಿಸಲಾಯಿತು. ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮೊದಲಾದವರು ಭಾಗವಹಿಸಿದ್ದರು.