ಮಂಗಳೂರು,ಜು.15: ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಸಂಸತ್ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಡಾ.ವೀರಪ್ಪಮೊಯ್ಲಿ ನೇತೃತ್ವದ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಆರ್ಪಿಎಲ್ನ ಸಿಎಸ್ಆರ್ ಫಂಡ್ನಿಂದ ನಿರ್ಮಾಣವಾಗಿರುವ ಈ ಆಸ್ಪತ್ರೆ ಯ ನೂತನ ಕಟ್ಟಡವನ್ನು ಶೀಘ್ರದಲ್ಲಿ ಉದ್ಘಾಟನೆ ನಡೆಸಲಾಗುವುದು ಇನ್ನೂ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವ, ರಾಜ್ಯ ಆರೋಗ್ಯ ಇಲಾಖೆ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರ ಸಮಯವನ್ನು ನೋಡಿ ದಿನಾಂಕ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಲೇಡಿ ಗೋಶನ್ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಅತಿದೊಡ್ಡ ಯೋಜನೆಯಾಗಿದೆ. ಸಮೀಪದ 8 ಜಿಲ್ಲೆಗಳಿಗೆ ಈ ಆಸ್ಪತ್ರೆಯಿಂದ ಪ್ರಯೋಜನ ಸಿಗಲಿದೆ. ಈಗಾಗಲೇ ನೂತನ ಆಸ್ಪತ್ರೆ ಕಟ್ಟಡಕ್ಕೆ 1.5 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನೂ 5 ಕೋಟಿ ರೂ. ಅನುದಾನವನ್ನು ಆಸ್ಪತ್ರೆಗೆ ಸಂಬಂಧಿಸಿದ ಸಲಕರಣೆಗೆ ಒದಗಿಸಲಾಗುವುದು. ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರ ಮತ್ತು ಕೆಎಂಸಿ ಆಶ್ರಯದಲ್ಲಿ 100 ವೈದ್ಯರನ್ನು 53 ನರ್ಸ್ ಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು. ಈ ವೇಳೆ ಸಂಸತ್ ಹಣಕಾಸು ಸ್ಥಾಯಿ ಸಮಿತಿ ಸದಸ್ಯರು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಎಂಆರ್ಪಿಎಲ್ನ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.