ಉಳ್ಳಾಲ,ಜು15: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉಳ್ಳಾಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಉಳ್ಳಾಲ ಧರ್ಮನಗರದ ಬೊಟ್ಟು ನಿವಾಸಿ ಮುಖ್ತಾರ್(24) ಬಂಧಿತ ಆರೋಪಿ. ಈತನ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯದಿಂದ ನಾಲ್ಕು ಬಾರಿ ವಾರಂಟ್ ಜಾರಿಯಾಗಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಉಳ್ಳಾಲ ಠಾಣಾ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರೆ.