ಉಡುಪಿ,ಜು.15: ಪೆಟ್ರೋಲ್ ಬೆಲೆ ಏರಿಕೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಉಡುಪಿಯ ಬಡಗಬೆಟ್ಟು ಕೋ ಅಪರೇಟಿವವ್ ಸೊಸೈಟಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ಶಾಲಾ ಮಕ್ಕಳಿಗೆ ನೀಡಲಾದ ಸೈಕಲ್ ನ್ನು ವಿತರಿಸಿದ ಕಾಪು ಶಾಸಕ ಲಾಲಾಜಿಮೆಂಡನ್ ಮಾತನಾಡಿ, ಪೆಟ್ರೋಲ್ ಬೆಲೆ ದುಬಾರಿಯಾಗಿದೆ. ಹಾಗಾಗಿ ಸೈಕಲ್ ಬಳಸುವುದರ ಮೂಲಕ ಇಂಧನದ ಬೆಲೆ ಏರಿಕೆಯ ನಿಯಂತ್ರಣದ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಹೇಳಿಕೆ ನೀಡಿದ್ದರು. ಶಾಸಕರ ಹೇಳಿಕೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮದಲ್ಲಿಯೇ ಟಾಂಗ್ ನೀಡಿದರು. ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದ ಸಂದರ್ಭ ಪೆಟ್ರೋಲ್ ಬೆಲೆ ಏರಿಕೆಯಾದಾಗ ಬಿಜೆಪಿಗರು ಪ್ರತಿಭಟನೆ ನಡೆಸುತ್ತಾರೆ .ಅದೇ ತನ್ನ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ಸೈಕಲ್ ಸವಾರಿ ಮಾಡಬೇಕು ಅಂತ ಹೇಳ್ತಾರೆ ಎಂದು ಲೇವಡಿ ಮಾಡಿದ್ರು.