ಉಡುಪಿ, ಫೆ. 21 (DaijiworldNews/HR): ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಆರಂಭಿಸಿರುವ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಡಿಸಿ ಜಿ ಜಗದೀಶ್, ಇದೀಗ ರಾತ್ರಿಯೂ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮದ ಜನರ ಕಷ್ಟ ಆಲಿಸಿದ್ದಾರೆ.


ಉಡುಪಿ ಜಿಲ್ಲೆ ಕಾಪು ತಾಲೂಕು ನಂದಿಕೂರು ಗ್ರಾಮದಲ್ಲಿ ಡಿಸಿ ವಾಸ್ತವ್ಯ ಮಾಡಿದ್ದು, ನಂದಿಕೂರು ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಪಾಠ, ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಇನ್ನು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಾಲೆಯಲ್ಲೇ ರಾತ್ರಿಯ ಸಸ್ಯಾಹಾರಿ ಊಟ ಸೇವಿಸಿ ಬಳಿಕ ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ, ಜನರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.