ಕಾಸರಗೋಡು, ಫೆ. 21 (DaijiworldNews/SM): ಬಿಜೆಪಿಯ ವಿಜಯ ಯಾತ್ರೆ ಉದ್ಘಾಟನೆಗೆ ಕಾಸರಗೋಡಿಗೆ ಆಗಮಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪಾಪ್ಯುಲರ್ ಫ್ರ೦ಟ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶ ಮಾಡಿದ್ದು, ಈ ಘಟನೆ ನಗರದ ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ನಡೆದಿದೆ. ಸುಮಾರು ೨೦೦ ರಷ್ಟು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪಾಪ್ಯುಲರ್ ಫ್ರ೦ಟ್ ಜಿಲ್ಲಾಧ್ಯಕ್ಷ ಸಿ .ಟಿ ಸುಲೈಮಾನ್ ಪ್ರತಿಭಟನಾ ಸಮಾವೇಶವನ್ನು ಉದ್ಘಾಟಿಸಿದ ಬಳಿಕ ಮೆರವಣಿಗೆ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾಗಿದ್ದರು. ಯಾವುದೇ ಘರ್ಷಣೆ ನಡೆಯದಂತೆ ಪೊಲೀಸರು ಕ್ರಮ ತೆಗೆದುಕೊಂಡರು.