ಮಂಗಳೂರು, ಫೆ. 21 (DaijiworldNews/SM): ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಹಾಗೂ ದ.ಕ. ಜಿಲ್ಲೆಯ ಗಡಿಗಳನ್ನು ಬಂದ್ ಮಾಡಲಾಗಿದೆ. ಕೇವಲ ಪ್ರಮುಖ ಐದು ಗಡಿಗಳನ್ನು ಹೊರತುಪಡಿಸಿ ಉಳಿದ ಗಡಿಗಳನ್ನು ಬಂದ್ ಮಾಡಲಾಗುತ್ತಿದೆ.

ಫೆಬ್ರವರಿ 22ರ ಸೋಮವಾರದಿಂದ ಐದು ಗಡಿಗಳನ್ನು ಹೊರತುಪಡಿಸಿ ಇತರ ಗಡಿಗಳ ಮೂಲಕ ದ.ಕ. ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರವಿವಾರ ಸಂಜೆಯಿಂದಲೇ ಗಡಿಗಳನ್ನು ಮುಚ್ಚುವ ಕಾರ್ಯ ಶುರು ಮಾಡಲಾಗಿದೆ. ದ.ಕ. ಜಿಲ್ಲಾ ಪೊಲೀಸ್ ಇಲಾಖೆ ಈಗಾಗಲೇ ಗಡಿಗಳಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು, ಬಂದೋಬಸ್ತ್ ಏರ್ಪಡಿಸಿದ್ದಾರೆ.
ಇನ್ನು ಗಡಿ ಭಾಗದ ಜನರಿಗೆ ಯಾವುದೇ ಮುನ್ಸೂಚನೆಗಳನ್ನು ನೀಡದೆ ಗಡಿಗಳನ್ನು ಬಂದ್ ಮಾಡಲಾಗಿದೆ ಎನ್ನುವ ಆರೋಪ ವ್ಯಕ್ತವಾಗುತ್ತಿದ್ದು, ಮತ್ತೆ ಪರದಾಟದ ಪರಿಸ್ಥಿತಿ ಎದುರಾಗಲಿದೆ.