ಮಂಜೇಶ್ವರ, ಫೆ.22 (DaijiworldNews/PY): ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸಹಿತ ಓರ್ವನನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬಂಧಿತನನ್ನು ಮಜಿಬೈಲ್ ಸಮೀಪದ ಕರಿಬೈಲ್ನ ಎ. ರಾಮ (35) ಎಂದು ಗುರುತಿಸಲಾಗಿದೆ.
ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.