ಮಂಜೇಶ್ವರ, ಫೆ.22 (DaijiworldNews/HR): ಕರ್ನಾಟಕ ಪ್ರವೇಶಕ್ಕೆ ಕೊರೊನಾ ನೆಗಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಿರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ದೈನಂದಿನ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದು ಕೊರೊಆ ತಪಾಸಣೆಗೆ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಮುಗಿ ಬೀಳುವಂತೆ ಮಾಡಿದೆ.

ಮಂಗಲ್ಪಾಡಿ ತಾಲೂಕು ಆಸ್ಪತ್ರೆ ಮುಂಭಾಗದಲ್ಲಿ ಕಿಲೋ ಮೀಟರ್ಗಳಷ್ಟು ಸರದಿ ಸಾಲಿನಲ್ಲಿ ನಿಲ್ಲಬೇಕಾದ ಸ್ಥಿತಿ ಉಂಟಾಗಿದ್ದು, ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ.
ಮಂಗಳೂರು ಹಾಗೂ ಇತರ ಕಡೆಗಳಿಗೆ ತೆರಳುವ ವಿದ್ಯಾರ್ಥಿಗಳು ಸೋಮವಾರ ಶಾಲೆಗೆ ತೆರಳಲು ಸಾಧ್ಯವಾಗದೆ ಕೊರೊನಾ ತಪಾಸಣೆಗೆ ಬೆಳೆಗ್ಗಿನಿಂದ ಸಂಜೆ ತನಕ ಕಾಯಬೇಕಾದ ಸ್ಥಿತಿ ಉಂಟಾಗಿದೆ.
ತಪಾಸಣೆಗೆ ಅಗತ್ಯ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದ್ದು, ದಿನಂಪ್ರತಿ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮಂದಿ ಮಂಗಳೂರು ಒಳಗೊಂಡಂತೆ ಕರ್ನಾಟಕಕ್ಕೆ ತೆರಳುತ್ತಿದ್ದು, ಇದರಿಂದ ಈಗಿನ ದಕ್ಷಿಣ ಕನ್ನಡ ಜಿಲ್ಲಾಡಳಿತದ ತೀರ್ಮಾನ ಗಡಿನಾಡ ಜನತೆಗೆ ಸಮಸ್ಯೆಯಾಗಿ ಕಾಡುತ್ತಿದೆ ಎನ್ನಲಾಗಿದೆ.