ಮಂಗಳೂರು, ಫೆ. 22 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ 10 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 34,324ಕ್ಕೆ ಏರಿಕೆಯಾಗಿದೆ. ಈ ಪೈಕಿ 210 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 5,57,048 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,22,724 ಮಂದಿಯ ವರದಿ ನೆಗೆಟಿವ್ ಆಗಿದೆ. ಇನ್ನು ಸೋಮವಾರ 20 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 33,374ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 740 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲೆಯಲ್ಲಿ ಸೋಮವಾರ 12 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದಾಗಿ ಒಟ್ಟು ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,538ಕ್ಕೆ ಏರಿಕೆಯಾಗಿದೆ. ಈ ಪೈಕಿ 53 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,59,039 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,35,501 ಮಂದಿಯ ವರದಿ ನಕಾರಾತ್ಮಕವಾಗಿವೆ.
ಸೋಮವಾರ 12 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಇಲ್ಲಿಯ ತನಕ ಒಟ್ಟು ಗುಣಮುಖರಾದವರ ಸಂಖ್ಯೆ 23,296 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಜಿಲ್ಲೆಯಲ್ಲಿ ಒಟ್ಟು 189 ಸಾವುಗಳು ಸಂಭವಿಸಿವೆ.