ಉಡುಪಿ, ಜು 16: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರು ಪಡಿಸಲಾಗಿದೆ. ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ, ನಂದಳಿಕೆ ನಿರಂಜನ್ ಭಟ್ ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಪೊಲೀಸ್ ಬಿಗುಬಂದೋಬಸ್ತ್ನಲ್ಲಿ ಆರೋಪಿಗಳನ್ನು ಕರೆ ತಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಹಿನ್ನೆಲೆ ಕೋರ್ಟ್ ಆವರಣದ ಮುಂಭಾಗ ಸಶಸ್ತ್ರ ಹೊಂದಿರುವ ಪೊಲೀಸರನ್ನು ನಿಯೋಜನೆ ಮಾಡಲಾಯಿತು. ಇನ್ನು ಇದೇ ಸಂದರ್ಭ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಡ್ತಿ ಕೂಡ ನ್ಯಾಯಾಲಯಕ್ಕೆ ಹಾಜರಾದರು. ಇನ್ನು ಮುಂದಿನ ಮೂರು ದಿನಗಳ ಕಾಲ ನ್ಯಾಯಾಲಯದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ನಡೆಯಲಿದೆ.