ಮಂಗಳೂರು, ಫೆ.24 (DaijiworldNews/MB) : ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ್. ಆರ್. ನಿರಾಣಿ ಅವರು ಫ್ರಬ್ರವರಿ 24 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

ಫೆಬ್ರವರಿ 24 ರಂದು ಬೆಳಿಗ್ಗೆ 9.05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಟಿ. ವಿ. ರಮಣ ಪೈ ಕನ್ವೆನ್ಷನ್ ಹಾಲ್, ಕೊಡಿಯಾಲ್ಬೈಲ್ ನ ಉಡುಪಿ ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರಿಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇವರಿಗೆ ಗುರುವಂದನೆ ಮಾಡಲಿದ್ದಾರೆ. ನಂತರ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣೆ ಹಾಗೂ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ 73 ರ ಹುಟ್ಟುಹಬ್ಬ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಮಂಗಳೂರು ಪ್ರವಾಸಿ ಮಂದಿರದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಮಂಗಳೂರು-ಬಜ್ಪೆ ಕೋ-ಆಪರೇಟಿವ್ ಬ್ಯಾಂಕ್ಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ 7.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.
ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್ ರವರು ಫೆಬ್ರವರಿ 24 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರವರಿ 24 ರಂದು ಬೆಳಿಗ್ಗೆ 9.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಿಗ್ಗೆ 10.00ಕ್ಕೆ ದಿ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಆಯೋಜಿಸಲಾಗಿರುವ ಇನೋವೇಷನ್ ಕಾನ್ಕ್ಲೇವ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಸಹ್ಯಾದ್ರಿ ಕಾಲೇಜಿನಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್, ರಿಸರ್ಚ್ ಡಿಸೈನ್ ಲ್ಯಾಬ್ ಮತ್ತು ಇಂಡಸ್ಟ್ರಿ ಹಬ್ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.45 ಗಂಟೆಗೆ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ರಾತ್ರಿ 7.35ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.