ಮಂಗಳೂರು, ಫೆ. 25 (DaijiworldNews/HR): ಉರ್ವಾ ಬಳಿಯ ದಡ್ಡಲ್ ಕಾಡ್ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಲ್ಲಿ ಅವಹೇಳನಕಾರಿ ಬರಹದ ಪತ್ರ ಮತ್ತು ಕಾಂಡೋಮ್ ಪತ್ತೆಯಾಗಿದೆ.



ಫೆಬ್ರವರಿ 24 ರ ಬುಧವಾರ ರಾತ್ರಿ ಈ ಕೃತ್ಯವನ್ನು ದುಷ್ಕರ್ಮಿಗಳು ನಡೆಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕಾರ್ಪೋರೇಟರ್ ಶಶಿಧರ್ ಹೆಗ್ಡೆ ತಕ್ಷಣ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದು, ಕೂಡಲೇ ಅಪರಾಧಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಉರ್ವಾ ಪೊಲೀಸರು ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.