ಕಡಬ, ಫೆ.27 (DaijiworldNews/HR): ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತಗೊಂಡ ಘಟನೆ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆ ಎದುರು ನಡೆದಿದೆ.



ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದು, ಇತ್ತ ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರಿಗೆ ಹೋಗುತ್ತಿದ್ದು, ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಎರಡೂ ವಾಹನದ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮುಂಜಾನೆ ಸಮಯದಲ್ಲಿ ಈ ಪ್ರದೇಶವು ದಟ್ಟವಾದ ಮಂಜಿನಿಂದ ಆವೃತವಾಗಿರುವುದು ಈ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಈ ಬಗ್ಗೆ ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.