ಮಂಗಳೂರು, ಫೆ.27 (DaijiworldNews/PY): ವಂಚನೆ ಆರೋಪ ಪ್ರಕರಣದ ಆರೋಪಿಗಳ ಕಾರನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಈ ಹಿಂದಿನ ಪಿಎಸ್ಐ ಕಬ್ಬಳ್ ರಾಜ್, ನಾರ್ಕೋಟಿಕ್ ಠಾಣೆ ಇನ್ಸ್ಪೆಕ್ಟರ್ ರಾಮಕೃಷ್ಣ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಸಿಐಡಿ ತಂಡವು, ಮಂಗಳೂರಿನಲ್ಲಿರುವ ಇನ್ಸ್ಪೆಕ್ಟರ್ ರಾಮಕೃಷ್ಣ ಹಾಗೂ ಚಿಕ್ಕಮಗಳೂರಿನಲ್ಲಿರುವ ಪಿಎಸ್ಐ ಕಬ್ಬಳ್ ರಾಜ್ ಅವರನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಹಿರಿಯ ಪೊಲೀಸ್ ಅಧಿಕಾರಿಗಳು ಅಮಾನತುಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.