ಬೆಂಗಳೂರು , ಜು 19 : ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅಗತ್ಯ ಬಿದ್ದರೆ ತನಿಖೆ ಅನಿವಾರ್ಯ ಎಂದಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಶಿರೂರು ಶ್ರೀಗಳ ಸಾವು ಧಾರ್ಮಿಕ ಕ್ಷೇತ್ರದಲ್ಲಿ ತುಂಬಲಾರದ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಅನುಮಾನಗಳೇನಾದರೂ ಕಂಡು ಬಂದರೆ ತನಿಖೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಸಾವಿನ ಸಂಶಯದ ಬಗ್ಗೆ ನಮಗೆ ಈವರೆಗೆ ಯಾವುದೇ ಸರ್ಕಾರದ ಮಟ್ಟದಲ್ಲಿ ಅಧಿಕೃತ ಮಾಹಿತಿ ಬಂದಿಲ್ಲ, ಬಂದರೆ ತನಿಖೆಗೆ ವಹಿಸುವ ಕುರಿತು ತೀರ್ಮಾನಿಸಲಾಗುವುದು ಎಂದರು.