ಮಂಗಳೂರು, ಜು 20: 2009ರಲ್ಲಿ ನಡೆದ ಕ್ಯಾಂಡಲ್ ಸಂತು ಅಲಿಯಾಸ್ ಸಂತೋಷ್ ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಾದ ಇಕ್ಬಾಲ್ ಕಾವೂರು ಹಾಗೂ ಕಾರ್ಕಳದ ಫಾರೂಕ್ ನಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.
ಹತ್ಯೆಗೀಡಾಗಿರುವ ಕ್ಯಾಂಡಲ್ ಸಂತು
ಆರೋಪಿಗಳಾದ ಫಾರೂಕ್, ಇಕ್ಬಾಲ್
2009ರ ಫೆಬ್ರವರಿ ೧೮ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಸಂತೋಷ್ ಗೆ ಕಾರಿನಲ್ಲಿ ಬಂದ ಅಪರಿಚಿತರ ಗುಂಪೊಂದು ತಲೆ ಹೊಟ್ಟೆ ಭಾಗಕ್ಕೆ ಕತ್ತಿಯಿಂದ ಕಡಿದು ಕೊಲೆಗೈದಿತ್ತು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು 22 ಜನ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶಿಸಿದೆ.