ಮಂಗಳೂರು, ಮಾ.02 (DaijiworldNews/MB) : ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾ.2 ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕರ್ನಾಟಕದ ಮುರುಡೇಶ್ವರ ಮೂಲದ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ.
ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಮೊಹಮ್ಮದ್ ಅವಾನ್, ತನ್ನ ಟ್ರಾಲಿ ಬ್ಯಾಗ್ನಲ್ಲಿ ಮರೆ ಮಾಚಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾನೆ.
ಆರೋಪಿಯಿಂದ ರೂ .16,52,000 ಮೌಲ್ಯದ 350.00 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.