ವಿಟ್ಲ, ಜು 24: ಕಲ್ಲಿನ ಕೋರೆಯಲ್ಲಿ ಈಜಾಲೆಂದು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ವಿಟ್ಲದ ಕೇಪು ಗ್ರಾಮದ ಪದವು ಎಂಬಲ್ಲಿ ಜು 23 ರ ಸೋಮವಾರ ನಡೆದಿದೆ.
ನೀರುಪಾಲದ ವ್ಯಕ್ತಿಯನ್ನು ಸುಂದರ ಎಂದೂ ಗುರುತಿಸಲಾಗಿದೆ. ಸ್ನೇಹಿತರ ಜತೆ ಈಜಾಡಲು ನಿನ್ನೆ ಹೋದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಬಳಿಕ ನಿನ್ನೆ ರಾತ್ರಿಯವರೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದು, ಮೃತದೇಹ ಪತ್ತೆಯಾಗಿರಲಿಲ್ಲ. ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದ ವಿಟ್ಲ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.