ಮಂಗಳೂರು, ಮಾ.02 (DaijiworldNews/MB) : ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಚ್ 2 ರ ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

















ಪ್ರತಿಭಟನಾಕಾರರು ಕ್ಲಾಕ್ ಟವರ್ನಿಂದ ಡಿಸಿ ಕಚೇರಿಗೆ ಒಂದು ಎತ್ತಿನ ಬಂಡಿಯೊಂದಿಗೆ ರ್ಯಾಲಿ ನಡೆಸಿದರು. ಕೆಲವು ಕಾಂಗ್ರೆಸ್ ಕಾರ್ಯಕರ್ತರು ಉರುವಲು ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತೊಯ್ದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು, "ಒಬ್ಬ ಆಡಳಿತಗಾರ ಉದ್ಯಮಿಯಾಗಿದ್ದರೆ, ಅವನ ಪ್ರಜೆಗಳು ಭಿಕ್ಷುಕರಾಗುತ್ತಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಅಘೋಷಿತ ನಿರಂಕುಶಾಧಿಕಾರಿ ಸರ್ಕಾರವಾಗಿದೆ'' ಎಂದು ದೂರಿದರು.
''ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ, ಪೆಟ್ರೋಲ್ನ ಅಬಕಾರಿ ಸುಂಕ 9 ರೂ. ಮತ್ತು ಡೀಸೆಲ್ಗೆ 3 ರೂ. ಆಗಿತ್ತು. ಆದರೆ ಈಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ಗೆ 33 ರೂ. ಮತ್ತು ಡೀಸೆಲ್ಗೆ 32 ರೂ. ಗೆ ಏರಿಸಿದೆ'' ಎಂದು ಆರೋಪಿಸಿದರು.
"ಜನರ ಪರವಾದ ನೀತಿಗಳು, ಭೂ ಸುಧಾರಣಾ ಕಾಯ್ದೆಗಳ ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಮೀಸಲಾತಿಯನ್ನು ಪರಿಚಯಿಸಿದ್ದು ಕಾಂಗ್ರೆಸ್. ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಬದಲಾಗಿ ಅದು ಕಾರ್ಪೊರೇಟ್ ರಂಗದ ಹಿತಾಸಕ್ತಿಗಳನ್ನು ರಕ್ಷಿಸುತ್ತಾರೆ. ಅವರು ಎಂದಿಗೂ ಬಡವರ ಹಿತಾಸಕ್ತಿಗಳನ್ನು ರಕ್ಷಿಸುವುದಿಲ್ಲ. ಮತ ಪಡೆಯಲು ಮಾತ್ರ ಅವರು ಬಡವರ ಬಗ್ಗೆ ಮಾತನಾಡುತ್ತಾರೆ'' ಎಂದು ಹೇಳಿದರು.
"ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು, ಜನರಿಗೆ ಕಪ್ಪು ಹಣವನ್ನು ಮರಳಿ ತರುವ ಭರವಸೆ ನೀಡಿದೆ. ಆದರೆ ಅಧಿಕಾರಕ್ಕೆ ಬಂದು ಏಳು ವರ್ಷಗಳಾದರೂ, ಅದನ್ನು ತರಲು ವಿಫಲವಾಗಿದೆ" ಎಂದು ಹೇಳಿದರು.
''ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ಆಯ್ಕೆ ಮಾಡುವಂತೆ ಸಾರ್ವಜನಿಕರನ್ನು ಕೋರಿದ ಅವರು ಇದು ಇಂಧನ ಮತ್ತು ಇತರ ಸರಕುಗಳ ಬೆಲೆಯನ್ನು ಕಡಿಮೆ ಮಾಡುತ್ತದೆ ಎಂದರು. "ನೀವು ಎಲ್ಲಾ ಜನರನ್ನು ಕೆಲವು ಸಮಯಗಳಲ್ಲಿ ಮರುಳು ಮಾಡಬಹುದು, ಆದರೆ ನೀವು ಎಲ್ಲ ಜನರನ್ನು ಮೋಸಗೊಳಿಸಲು ಸಾಧ್ಯವಿಲ್ಲ" ಎಂದು ರೈ ಬಿಜೆಪಿಗೆ ಹೇಳಿದರು.
ಮಾಜಿ ಸಚಿವ ಮತ್ತು ಶಾಸಕ ಯು.ಟಿ.ಖಾದರ್ ಮಾತನಾಡಿ, "ಬಿಜೆಪಿ ನೇತೃತ್ವದ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಜನರು ಮುಂದೆ ಬರಬೇಕು. ಭಾರತವನ್ನು ಮಾರಾಟ ಮಾಡಲು ಮತ್ತು ಸಾರ್ವಜನಿಕರ ಮೇಲಿನ ತೆರಿಗೆಯ ಹೊರೆ ಹೆಚ್ಚಿಸಲು ಬಿಜೆಪಿ ಸರ್ಕಾರ ಇಲ್ಲಿದೆ. ಕಾಂಗ್ರೆಸ್ ಸರ್ಕಾರ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿತ್ತು, ಆದರೆ ಅದನ್ನು ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ'' ಎಂದು ದೂರಿದರು.
ರಾಜ್ಯದ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಖಾದರ್ ಅವರು, "ರಾಜ್ಯದ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರವು ನೀಡಬೇಕಾದ ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಲು ವಿಫಲವಾದ ಕಾರಣ ಮೀನುಗಾರರು ಸಂಕಷ್ಟದಲ್ಲಿದ್ದಾರೆ" ಎಂದು ಹೇಳಿದರು.
"ಸರ್ಕಾರವು ಮೇಲ್ವರ್ಗಕ್ಕೆ ಸೇರಿದ ಜನರಿಗೆ ಮೀಸಲಾತಿ ನೀಡಿದರೆ, ಅದು ಜಿಲ್ಲೆಯ ಇತರ ಹಿಂದುಳಿದ ವರ್ಗಗಳಿಗೆ ದ್ರೋಹ ಮಾಡಿದ್ದಂತೆ. ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಭಟನೆ ನಡೆಸಿದ್ದರು. ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಅವರು ಈಗ ಏಕೆ ಮೌನವಾಗಿದ್ದಾರೆ?'' ಎಂದು ಪ್ರಶ್ನಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, "ಕೇಂದ್ರ ಸರ್ಕಾರದ ನೀತಿಗಳು ಸಾಮಾನ್ಯ ಜನರನ್ನು ತೊಂದರೆಗೆ ಸಿಲುಕಿಸುತ್ತಿವೆ. ನರೇಂದ್ರ ಮೋದಿಯವರ ಸರ್ಕಾರವು ಅಂಬಾನಿ ಮತ್ತು ಅದಾನಿಯಂತಹ ಕಾರ್ಪೊರೇಟ್ಗಳತ್ತ ಮಾತ್ರ ಒಲವು ತೋರುತ್ತಿದೆ" ಎಂದು ಆರೋಪಿಸಿದರು.
ಪ್ರಧಾನ ಮಂತ್ರಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲು ಸಿದ್ಧರಿಲ್ಲ, ಬದಲಿಗೆ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಮಾತನಾಡುತ್ತಲೇ ಇರುತ್ತಾರೆ ಟೀಕಿಸಿದರು.
ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೊಳ್ಳಿ ಕೂಡ ಪ್ರತಿಭಟನೆಯಲ್ಲಿ ಮಾತನಾಡಿದರು. ಮಾಜಿ ಶಾಸಕರಾದ ಜೆ ಆರ್ ಲೋಬೊ, ಮೊಯ್ದೀನ್ ಬಾವಾ, ಶಕುಂತಲಾ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.