ಮಂಗಳೂರು, ಮಾ. 02 (DaijiworldNews/SM): ಗೌಡ ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆ ಸಾಮಾಜಿಕ ಹೋರಾಟಗಾರ ಶಶಿಧರ್ ಶೆಟ್ಟಿ ವಿರುದ್ಧ ಮಂಗಳೂರು ಪೊಲೀಸ್ ಆಯುಕ್ತರಿಗೆ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ದೂರು ನೀಡಿದ್ದು, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಇತ್ತೀಚೆಗೆ ನಗರದ ಉರ್ವಸ್ಟೋರ್ ಬಳಿ ಸಾಮಾಜಿಕ ಜಾಲತಾಣದಲ್ಲಿ ಶಶಿಧರ್ ಶೆಟ್ಟಿ ಗೌಡ ಸಮುದಾಯದ ಜನರಿಗೆ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ವಲಸೆ ಕೂಲಿ ಕಾರ್ಮಿಕರನ್ನು ಗೌಡರೆಂದು ಕೀಳಾಗಿ ನಿಂದನೆ ಮಾಡಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ.
ಅಲ್ಲದೆ, ಶಶಿಧರ್ ಶೆಟ್ಟಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.