ಬೆಂಗಳೂರು , ಜು 25 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಘಾತಕಾರಿ ವಿಚಾರ ಎಂದರೆ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾನೆ.
ಮಡಿಕೇರಿ ಮೂಲದ ರಾಜೇಶ್ ಬಂಗೇರಾ ಬಂಧಿತ ವ್ಯಕ್ತಿ. ಕೆಲವು ದಿನಗಳ ಹಿಂದೆ ಬಂಧನಕ್ಕೆ ಒಳಗಾಗಿದ್ದ ಶ್ರೀರಾಮ ಸಂಘಟನೆಯ ಕಾರ್ಯಕರ್ತ ಮೋಹನ್ ನಾಯಕ್ ವಿಚಾರಣೆ ಸಂದರ್ಭದಲ್ಲಿ ರಾಜೇಶ್ ಬಂಗೇರಾ ಹೆಸರು ಬಹಿರಂಗಗೊಂಡಿತ್ತು. ಇದರ ಬೆನ್ನುಹತ್ತಿದ್ದ ಎಸ್ ಐ ಟಿ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ 13 ದಿನಗಳ ಕಾಲಕ್ಕೆ ವಶಕ್ಕೆ ಪಡೆದಿದ್ದಾರೆ.