ಬೆಂಗಳೂರು, ಜು25 : ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಡಿಕ್ಕಿ ಹೊಡೆದು ಯುವಕರಿಬ್ಬರು ಸಾವನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಜು. ೨೪ ರ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ಪಟ್ಟ ಯುವಕನನ್ನು ಶ್ರಿನಿಧಿ ಅಸ್ರಣ್ಣ (21) ಮತ್ತು ಪ್ರಜ್ವಲ್(20) ಎಂದು ಗುರುತಿಸಲಾಗಿದೆ. ಶ್ರಿನಿಧಿ ಅಸ್ರಣ್ಣ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದ ಅನುವಂಶಿಕ ಅರ್ಚಕ ಹರಿನಾರಯಣದಾಸ ಅಸ್ರಣ್ಣ ಅವರ ಪುತ್ರರಾಗಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಇವರು ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ.
ಸ್ನೇಹಿತನನ್ನು ಮನೆಗೆ ಬಿಡಲೆಂದು ಕಾರಿನಲ್ಲಿ ತೆರಳಿದ್ದರು.ನಾಲ್ವರಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿಯಾಗಿ ಬಳಿಕ ಸರಕಾರಿ ಬಸ್ಗೆ ಢಿಕ್ಕಿಯಾಗಿ ಸಂಪೂರ್ಣ ನಜ್ಜುಗುಜ್ಜಾ ಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ