ಕೊಚ್ಚಿ,ಸೆ05: 102 ಪ್ರಯಾಣಿಕರು ಹಾಗೂ 6 ಸಿಬ್ಬಂದಿಯನ್ನೊಳಗೊಂಡ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಇಂದು ಬೆಳಗ್ಗಿನ ಜಾವ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ವೇಳೆ ಅವಘಡ ಸಂಭವಿಸಿದೆ, ಘಟನೆಯಿಂದ ಪ್ರಯಾಣಿಕರರಿಗೆ ಯಾವುದೇ ಹಾನಿಯಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಎಲ್ಲಾ ಪ್ರಯಾಣಿಕರನ್ನು ಏಣಿ ಮೂಲಕ ಕೆಳಗಿಳಿಸಲಾಗಿದೆ ಎಂದು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ವಿಮಾನ ಲ್ಯಾಂಡ್ ಆಗುವ ವೇಳೆ ಪಾರ್ಕಿಂಗ್ ವೇ ಕಡೆಗೆ ಸಮೀಪಿಸುತ್ತಿದ್ದಂತೆ ಪಥವನ್ನು ಬದಲಿಸಿದೆ. ಈ ಅವಘಡದಿಂದಾಗಿ ಬೋಯಿಂಗ್ 737-800 ವಿಮಾನದ ನೋಸ್ ವೀಲ್ ಜಖಂ ಆಗಿದೆ. ಸದ್ಯ ಈ ವಿಮಾನದ ಹಾರಾಟವನ್ನು ಸ್ಥಗಿತಗೊಳಿಸಲಾಗಿದ್ದು, ಘಟನೆಯ ಬಗ್ಗೆ ಆಂತರಿಕ ತನಿಖೆ ಹಾಗೂ ನಾಗರೀಕ ವಿಮಾನಯಾನ ನಿರ್ದೇಶನಾಲಯದಿಂದ್ಲೂ ತನಿಖೆ ಆರಂಭವಾಗಿದೆ.