ಕಾಪು, ಜು 30: ಇಲ್ಲಿನ ಸರಕಾರಿ ಶಾಲೆಯ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರೊಂದು ರಸ್ತೆ ದಾಟುತಿದ್ದ ಯುವಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳು ಅಪರಿಚಿತ ವ್ಯಕ್ತಿಯಾಗಿದ್ದು, ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಸ್ಥಳಕ್ಕೆ ಕಾಪು ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಗೆ ವೇಗದ ಚಾಲನೆಯೇ ಕಾರಣ ಎನ್ನಲಾಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.