ಬೆಂಗಳೂರು, ಜು 31: ಶಿರೂರು ಶ್ರೀ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂದಿಸಿದ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ಯಾವುದೇ ಆಧಾರ ರಹಿತ ಹಾಗೂ ಅವಹೇಳನಕಾರಿ ಸುದ್ದಿ ಪ್ರಕಟಿಸಿದಂತೆ ಅಥವಾ ಪ್ರಸಾರ ಮಾಡದಂತೆ ಮುದ್ರಣ ಹಾಗೂ ವಿದ್ಮುನ್ಮಾನ ಮಾಧ್ಯಮಗಳಿಗೆ ನಿರ್ದೇಶಿಸುವಂತೆ ಕೋರಿ ಉಡುಪಿ ಅಷ್ಟಮಠ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಚ್. ವಿ ಗೌತಮ್ ಹಾಗೂ ಧಾರ್ಮಿಕ ಚಿಂತಕ ಬಿ. ರಾಮಚಂದ್ರ ಉಅಪಾಧ್ಯಯ ಸಲ್ಲಿಸಿದ ತಕರಾರು ಅರ್ಜಿ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು.
ವಾದ ಪ್ರತಿವಾದ ಅಲಿಸಿದ ನ್ಯಾಯಪೀಠ , ಪ್ರತಿವಾದಿಗಳಾದ ರಾಜ್ಯ ಸರ್ಕಾರ , ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಉಡುಪಿ ಎಸ್.ಪಿ. ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿ, ಹಾಗೂ 36 ಮಾಧ್ಯಮ ಸಂಸ್ಥೆಗಳಿಗೆ ತುರ್ತು ನೊಟೀಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 2 ಕ್ಕೆ ಮುಂದೂಡಿತು. ಜತೆಗೆ ಶಿರೂರು ಶ್ರೀ ಸಾವಿನ ಕುರಿತ ಸುದ್ದಿ ಪ್ರಸಾರ ಮಾಡದಂತೆ ಈ ಹಂತದಲ್ಲಿ ಮಧ್ಯಂತರ ಆದೇಶ ನೀಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು. ಅರ್ಜಿದಾರರ ಪರ ಹಿರಿಯ ವಕೀಲ ಬಿ.ವಿ ಆಚಾರ್ಯ ಹಾಗೂ ವಕೀಲ ಅರುಣ್ ಶ್ಯಾಮ್ ವಕಾಲತ್ತು ವಹಿಸಿದ್ದರು.