ಪುತ್ತೂರು, ಆ 03: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಟ್ಟಂಪಾಡಿಯ ಇರ್ದೆ ಗ್ರಾಮದ ಬಳಿ ಜೋಗಿಮೂಲೆ ಎಂಬಲ್ಲಿ ಆ.03 ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಜೋಗಿಮೂಲೆ ನಿವಾಸಿ ರಮಣ್ (16) ಎಂದು ಗುರುತಿಸಲಾಗಿದೆ. ಈತ ಬೆಟ್ಟಂಪಾಡಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಈತನ ಮೃತದೇಹವು ಇಂದು ಬೆಳಗ್ಗೆ ಮನೆಯ ಕೋಣೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು ಘಟನಾ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಧಾವಿಸಿದ್ದು, ತನಿಖೆ ಮುಂದುವರಿಸಿದ್ದಾರೆ.