ಬಂಟ್ವಾಳ, ಆ.3: ಇಲ್ಲಿನ ಮೆಲ್ಕಾರ್ ಸಮೀಪದ ಬೋಳಂಗಡಿಯ ಬಳಿ ಕಾರು, ಬೈಕ್ ಮತ್ತು ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಜು.03ರ ಶುಕ್ರವಾರ ನಡೆದಿದೆ. ಮೊದಲಿಗೆ ಕಾರು ಹಿಂದಿನಿಂದ ಬೈಕ್ ಗೆ ಢಿಕ್ಕಿಹೊಡೆದಿದೆ ನಂತರ ಮತ್ತೊಂದು ವಾಹನಕ್ಕೆ ಢಿಕ್ಕಿಯಾಗಿ ಈ ಸರಣಿ ಅಘಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದಿದ್ದ ಬೈಕ್ ಗೆ ಢಿಕ್ಕಿಯಾಗಿದೆ. ಬಳಿಕ ಮುಂದಕ್ಕೆ ಚಲಿಸಿದ ಕಾರು ಪಿಕಪ್ ವಾಹನಕ್ಕೆ ಢಿಕ್ಕಿಯಾಗಿದೆ.

ಅಪಘಾತದಲ್ಲಿ ಕಾರು ಚಾಲಕ ಹಾಗೂ ಬೈಕ್ ಸವಾರರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಬೈಕ್ ಮತ್ತು ಕಾರು ನಜ್ಜುಗುಜ್ಜಾಗಿದ್ದರೆ , ಪಿಕಪ್ ವಾಹನ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯ ಬೋಳಂಗಡಿಯಲ್ಲಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯವುಂಟಾಗಿತ್ತು.
.