ಮಂಗಳೂರು: , ಆ 07: ಕನಿಷ್ಠ ಕೂಲಿ, ತುಟ್ಟಿಭತ್ಯೆ ಜಾರಿ ಹಾಗೂ ವಾರದಲ್ಲಿ ಆರು ದಿನಗಳ ಕೆಲಸಕ್ಕೆ ಒತ್ತಾಯಿಸಿ ಇಂದಿನಿಂದ ಬೀಡಿ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ರಾಜ್ಯದಲ್ಲಿರುವ ಸುಮಾರು 10 ಲಕ್ಷ ಬೀಡಿ ಕಾರ್ಮಿಕರು ಸೇರಿದಂತೆ ಬೀಡಿ ಉದ್ಯಮದಲ್ಲಿ ದುಡಿಯುತ್ತಿರುವ ಇತರೆ ಕಾರ್ಮಿಕರ ಕನಿಷ್ಠ ವೇತನವನ್ನು ಕಳೆದ ಎ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಇದನ್ನು ಜಾರಿಗೊಳಿಸುವಂತೆ ಹಾಗೂ ಎಲ್ಲಾ ಬೀಡಿ ಕಾರ್ಮಿಕರಿಗೆ ವಾರದಲ್ಲಿ ಆರು ದಿನದ ಕೆಲಸ ನೀಡಬೇಕು, ತಪ್ಪಿದಲ್ಲಿ ಗ್ಯಾರಂಟಿಡ್ ವೇತನ ನೀಡಬೇಕು. ಕನಿಷ್ಟ ಕೂಲಿ 1000 ಬೀಡಿಗೆ 210 ರೂಪಾಯಿಗಳನ್ನು ನೀಡಬೇಕು. ಬೀಡಿ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ನೀಡಬೇಕು. ಇವೇ ಮೊದಲಾದ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಬೀಡಿ ಕಾರ್ಮಿಕರ ಫೆಡರೇಷನ್(ಸಿಐಟಿಯು) ವತಿಯಿಂದ ಕರಾವಳಿಯ ಬೀಡಿ ಕಾರ್ಮಿಕರು ನಗರದ ಬಂಟ್ಸ್ ಹಾಸ್ಟೆಲ್ಸ್ ಬಳಿ ಇರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿಗೆ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ.