ಮಂಗಳೂರು, ಅ 7: ನೇತ್ರಾವತಿ ನದಿ ತಿರುಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ತ್ವರಿತಗೊಳಿಸಲು ಸೂಚಿಸಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ವಂಚನೆ ಮಾಡಿದ್ದಾರೆ ಎಂದು ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಾಯ್ಜಿವರ್ಲ್ಡ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿ ಆಗುವ ಮುನ್ನ ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಇದೊಂದು ಭ್ರಷ್ಟಾಚಾರದ ಯೋಜನೆ, ಇದಕ್ಕೆ ಅವಕಾಶ ನೀಡುವುದಿಲ್ಲ. ಅಧಿಕಾರಕ್ಕೆ ಬಂದಲ್ಲಿ ಯೋಜನೆ ವಿರುದ್ಧ ವಿಚಾರಣೆ ನಡೆಸುವುದಾಗಿ ಹೇಳಿದ್ದ ಕುಮಾರ ಸ್ವಾಮಿ ಇಂದು ಅದರ ಪರವಾಗಿದ್ದಾರೆ. ಕುಮಾರ ಸ್ವಾಮಿ ಇದೀಗ ಕಾಂಗ್ರೆಸ್ ಪಕ್ಷದಿಂದ ಸರಕಾರ ರಚಿಸಿದ್ದು, ಅವರ ಜೊತೆಗೆ ಯೋಜನೆ ಜಾರಿಗೆ ಯತ್ನಿಸುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳೂ ಬುಡಮೇಲಾಗಿದೆ ಎಂದಿದ್ದಾರೆ. ಈ ಬಗ್ಗೆ ನಾವು ಸಿಎಂಗೆ ಮನವಿ ನೀಡಿ ಯೋಜನೆ ತಡೆಯಲು ಯತ್ನಿಸಲಿದ್ದೇವೆ ಎಂದರು.