ಬೆಳ್ತಂಗಡಿ, ಮಾ.07 (DaijiworldNews/PY): ಧರ್ಮಸ್ಥಳ ಕ್ಷೇತ್ರಕ್ಕೆ ಶಿವರಾತ್ರಿಗೆಂದು ಬರುತ್ತಿದ್ದ ಪಾದಚಾರಿಗಳಿಗೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಘಟನೆ ಮಾ.7ರ ರವಿವಾರ ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ನ ಎರಡನೇ ತಿರುವಿನಲ್ಲಿ ನಡೆದಿದೆ.

ಸಾಂದರ್ಭಿಕ ಚಿತ್ರ
ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹತ್ತು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸಾಮಾಜಿಕ ಕಾರ್ಯಕರ್ತ ಹಸನಬ್ಬ ಹಾಗೂ ಇತರರು ಕೈಜೋಡಿಸಿದರು.
ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.