ಕುಂದಾಪುರ, ಮಾ. 07 (DaijiworldNews/SM): ದೇವಸ್ಥಾನದೊಳಗೆ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮಾರ್ಚ್ ೭ರ ರವಿವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ(35) ನೇಣಿಗೆ ಶರಣಾದವರು. ಮೃತ ಚಂದ್ರ ಪೂಜಾರಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದರು. ಎರಡು ವರ್ಷಗಳ ಹಿಂದಷ್ಟೇ ಅವರಿಗೆ ವಿವಾಹವಾಗಿತ್ತು. ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡಿ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು. ಈ ನಡುವೆ ಇತ್ತೀಚಿಗೆ ಖಿನ್ನತೆಯಿಂದ ಬಳಲುತ್ತಿದ್ದರು ಎಂಬುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆಯ ಕುರಿತಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.