ಮಂಗಳೂರು, ಮಾ. 07 (DaijiworldNews/SM): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರ್ಚ್ 7ರ ರವಿವಾರ 16 ಹೊಸ ಕೊರೊನಾ ವೈರಸ್ ಪ್ರಕರಣಗಳನ್ನು ವರದಿಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 30 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 5,80,676 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 5,46,107 ಮಾದರಿಗಳು ನಕಾರಾತ್ಮಕವಾಗಿವೆ. ಜಿಲ್ಲೆಯಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 34,569 ಆಗಿದ್ದು, ಈ ಪೈಕಿ ಕೇವಲ 225 ಪ್ರಕರಣಗಳು ಮಾತ್ರ ಸಕ್ರೀಯವಾಗಿವೆ.
ಭಾನುವಾರ 14 ರೋಗಿಗಳನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆಯನ್ನು 33,604 ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಕರೋನಾ ವೈರಸ್ ನಿಂದ ಒಟ್ಟು ಮೃತಪಟ್ಟವರ ಸಂಖ್ಯೆ 740ಕ್ಕೆ ತಲುಪಿದೆ.
ಉಡುಪಿ ಜಿಲ್ಲೆಯ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಇದುವರೆಗೆ 3,75,946 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಅದರಲ್ಲಿ 3,52,229 ಮಂದಿಯ ವರದಿ ನಕಾರಾತ್ಮಕವಾಗಿವೆ. ಭಾನುವಾರ 30 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 23,717 ಕ್ಕೆ ತಲುಪಿದ್ದು, ಈ ಪೈಕಿ 101 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಮೂರು ರೋಗಿಗಳನ್ನು ಆಸ್ಪತ್ರೆಗಳಿಂದ ರವಿವಾರ ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 23,426 ಕ್ಕೆ ತಲುಪಿದೆ. ಕೊರೊನಾವೈರಸ್ನಿಂದ ಜಿಲ್ಲೆಯಲ್ಲಿ ಇದುವರೆಗೆ 190 ಸಾವುಗಳು ಸಂಭವಿಸಿವೆ.