ಮಂಗಳೂರು, ಮಾ.09 (DaijiworldNews/MB): ಕೊರೊನಾ ಲಸಿಕಾ ಅಭಿಯಾನದ ಮೂರನೇ ಹಂತವು ಪ್ರಸ್ತುತ ನಡೆಯುತ್ತಿದೆ. ಜನರು ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಸೋಮವಾರದಿಂದ, ದಕ್ಷಿಣ ಕನ್ನಡ ಜಿಲ್ಲೆಯ 66 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಿರಿಯ ನಾಗರಿಕರಿಗೆ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ಅನಾರೋಗ್ಯ ಪೀಡಿತರಿಗೆ ಕೋವಿಶೀಲ್ಡ್ ಲಸಿಕೆಗಳನ್ನು ನೀಡಲು ಪ್ರಾರಂಭಿಸಲಾಗಿದೆ.

''ಜಿಲ್ಲೆಯ 30 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳು ಸೋಮವಾರದಿಂದ ಜನರಿಗೆ ಲಸಿಕೆ ನೀಡಲು ಪ್ರಾರಂಭಿಸಿದವು. ಮಾರ್ಚ್ 19 ರವರೆಗೆ ಈ ಸೇವೆ ಲಭ್ಯವಿರುತ್ತದೆ. ಬಳಿಕ ಲಸಿಕಾ ಅಭಿಯಾನದ ಮುಂದಿನ ಹಂತದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು'' ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಚಂದ್ರ ಬಾಯಾರಿ ತಿಳಿಸಿದ್ದಾರೆ.
ಏತನ್ಮಧ್ಯೆ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಅವರ ಅಧ್ಯಕ್ಷತೆಯಲ್ಲಿ ಕಚೇರಿಯಲ್ಲಿ ಸೋಮವಾರ ನಡೆದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿಯ ನಂತರ ಮಾತನಾಡಿದ ಅವರು, ''ಕೇರಳ ಮತ್ತು ಮಹಾರಾಷ್ಟ್ರ ಗಡಿಗಳಲ್ಲಿನ ಚೆಕ್ ಪೋಸ್ಟ್ಗಳಲ್ಲಿ ಜಾಗರೂಕರಾಗಿರಲು ಎಚ್ಚರಿಸಲಾಗಿದೆ. ಗ್ರಾಮ ಪಂಚಾಯತ್ ಕಾರ್ಯಪಡೆಯು ಈ ಎರಡು ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಮೇಲೆ ನಿಗಾ ವಹಿಸಿ ಅವರನ್ನು ಪರೀಕ್ಷೆಗೆ ಒಳಪಡಿಸಬೇಕು'' ಎಂದು ಹೇಳಿದರು.
''ಮದುವೆ ಮತ್ತು ಇತರ ಕಾರ್ಯಗಳ ಸಮಯದಲ್ಲಿ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಮಾರ್ಷಲ್ಗಳ ನೇಮಕಕ್ಕೆ ಸೂಚನೆ ನೀಡಲಾಗಿದೆ'' ಎಂದು ಹೇಳಿದರು.