ಕಾಸರಗೋಡು, ಮಾ.09 (DaijiworldNews/HR): ನಿರ್ಮಾಣ ಹಂತದಲ್ಲಿದ್ದ ಮನೆಯ ಸ್ಲಾಬ್ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇರಿಯ ಪಾನೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಸಾಂಧರ್ಭಿಕ ಚಿತ್ರ
ಮೃತಪಟ್ಟ ವ್ಯಕ್ತಿಯನ್ನು ಕಳ್ಳಾರಿನ ಮೋಹನನ್ (33) ಎಂದು ಗುರುತಿಸಲಾಗಿದೆ.
ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಕಾಞ೦ಗಾಡ್ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು, ನಾಗರಿಕರು ಮೇಲಕ್ಕೆತ್ತಿದರು.
ಅಂಬಲತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.