ಮಂಗಳೂರು, ಅ 10: ಕಳೆದ 2 ವಾರಗಳಿಂದ ಒಂದಿಷ್ಟು ಬಿಡುವು ಪಡೆದುಕೊಂಡಿದ್ದ ವರುಣನ ಆರ್ಭಟ ಮತ್ತೆ ಆರಂಭಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ತೀವ್ರ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೆರೆ ನೀರು ನಿಲ್ಲುತ್ತಿದೆ. ಜಿಲ್ಲೆಯ ವಿವಿಧೆಡೆ ಹಾನಿಯಾದ ಬಗ್ಗೆ ವರದಿಯಾಗಿದೆ.
ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ತೀವ್ರ ಮಳೆಯ ಪರಿಣಾಮ ನದಿಗಳು ತುಂಬಿ ಹರಿಯುತ್ತಿದೆ. ಹಲವೆಡೆಗಳಲ್ಲಿ ಮಳೆಯ ನೆರೆಯಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಜಿಲ್ಲೆಯ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.