ಕರಾವಳಿ, ಅ 12: ಕರಾವಳಿಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಪರಿಣಾಮ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಗಸ್ಟ್ 13ರಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಭಯ ಜಿಲ್ಲೆಗಳ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿಯಲ್ಲಿ ಕಳೆದ 1 ವಾರದಿಂದ ಮಳೆ ಚುರುಕುಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಣೆ ಮಾಡಿದ್ದರೆ, ಉಡುಪಿ ಜಿಲ್ಲೆಯಲ್ಲಿ ಡಿಸಿ ಪ್ರೀಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.