ಕಾಸರಗೋಡು, ಆ 15: ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಆಗಸ್ಟ್ 16ರಂದು ರಜೆ ಘೋಷಣೆ ಮಾಡಲಾಗಿದೆ. ಪ್ರಭಾರ ಜಿಲ್ಲಾಧಿಕಾರಿ ಎನ್. ದೇವಿದಾಸ್ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿಯಿಂದ ಡಿಗ್ರಿ ಕಾಲೇಜು ತನಕ ರಜೆ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಮಳೆ ಸುರಿಯಲಾರಂಬಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ನಡುವೆ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದ್ದು, ಓಣಂ ರಜೆ ಬಳಿಕ ಮಧ್ಯವಾರ್ಷಿಕ ಪರೀಕ್ಷೆಗಳು ನಡೆಯಲಿವೆ.