ಬಂಟ್ವಾಳ, ಆ 15: ಇಲ್ಲಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಸಮುದಾಯಭವನ ಅವರಣಗೋಡೆ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಶೀಘ್ರವಾಗಿ ಸರಕಾರದ ಅನುದಾನ ಬಳಸಿ ತಡೆಗೋಡೆ ಪುನರ್ ನಿರ್ಮಾಣ ಕಾರ್ಯ ಮಾಡುವಂತೆಯೂ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಸಂಜೀವ ಪೂಜಾರಿ, ಪ್ರಮೋದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.