ಕಾಸರಗೋಡು, ಮಾ.10 (DaijiworldNews/PY): ಎಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಡಿಎಫ್ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಉದುಮದಿಂದ ಸಿಪಿಎಂ ಅಭ್ಯರ್ಥಿಯಾಗಿ ಮಂಜೇಶ್ವರ ಶಾಸಕ ಸಿ.ಎಚ್.ಕುಞ೦ಬು, ತ್ರಿಕ್ಕರಿಪ್ಪುರದಿಂದ ಹಾಲಿ ಶಾಸಕ ಎಂ.ರಾಜಗೋಪಾಲ್ ಸಿಪಿಎಂ ಅಭ್ಯರ್ಥಿಯಾಗಿದ್ದಾರೆ.
ಕಾಞ೦ಗಾಡ್ನಿಂದ ಸಿಪಿಐನಿಂದ ಹಾಲಿ ಶಾಸಕ ಹಾಗೂ ರಾಜ್ಯ ಕಂದಾಯ ಸಚಿವ ಇ.ಚಂದ್ರಶೇಖರನ್ ಮೂರನೇ ಬಾರಿ ಕಣಕ್ಕಿಳಿಸಲಾಗಿದೆ.
ಕಾಸರಗೋಡು ಕ್ಷೇತ್ರದಲ್ಲಿ ಘಟಕ ಪಕ್ಷವಾದ ಐಎನ್ಎಲ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಒಂದೆರಡು ದಿನಗಳಲ್ಲಿ ಅಂತಿಮಗೊಳ್ಳಲಿದೆ.
ಮಂಜೇಶ್ವರ ದಲ್ಲಿ ಸಿಪಿಎಂನಿಂದ ಕೆ.ಆರ್.ಜಯಾನಂದ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದರೂ, ಪಕ್ಷದಲ್ಲಿ ಅಪಸ್ವರ ಕಂಡು ಬಂದ ಹಿನ್ನಲೆಯಲ್ಲಿ ಮುಂದೂಡಲಾಗಿದೆ.
ಯುಡಿಎಫ್ ಮತ್ತು ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಇನ್ನೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. ಎರಡು ದಿನಗಳಲ್ಲಿ ಅಭ್ಯರ್ಥಿಗಳ ಘೋಷಣೆಯಾಗುವ ಸಾಧ್ಯತೆಯಿಂದ. ಮಾರ್ಚ್ 12ರಂದು ಅಧಿಸೂಚನೆ ಹೊರಬೀಳುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ.