ಮಂಗಳೂರು, ಮಾ. 10 (DaijiworldNews/SM): ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 25 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದೆ. ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 34,619ಕ್ಕೆ ಏರಿಕೆಯಾಗಿವೆ. ಈ ಪೈಕಿ 218 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 5,87,244 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,52,625 ಮಂದಿಯ ವರದಿ ನೆಗೆಟಿವ್ ಆಗಿವೆ. 18 ಜನರನ್ನು ಬುಧವಾರ ಬಿಡುಗಡೆ ಮಾಡಲಾಗಿದ್ದು, ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ 33,660ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 741 ಸಾವುಗಳು ಈವರೆಗೆ ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ 32 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಸಂಖ್ಯೆ 23,780ಕ್ಕೆ ಏರಿಕೆಯಾಗಿದೆ. ಈ ಪೈಕಿ 107 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಈವರೆಗೆ 3,79,217 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,55,437 ಮಾದರಿಗಳು ನಕಾರಾತ್ಮಕವಾಗಿವೆ. ಬುಧವಾರ ಏಳು ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,483ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 190 ಸಾವುಗಳು ಸಂಭವಿಸಿವೆ.