ಉಡುಪಿ, ಮಾ. 10 (DaijiworldNews/SM): 67 ವರ್ಷದ ಮಹಿಳೆ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ಸುಟ್ಟು ಗಾಯಗೊಂಡು ಮೃತಪಟ್ಟಿರುವ ಘಟನೆ ಬ್ರಹ್ಮಾವರದ ವರಂಬಳ್ಳಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ.

ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಉಪ್ಪಿನಕೋಟೆ ನಿವಾಸಿ ಮಿಲ್ಲಿ ಡಿಸಿಲ್ವಾ(67) ಮೃತಪಟ್ಟ ಮಹಿಳೆಯಾಗಿದ್ದಾರೆ. ಮಾರ್ಚ್ 6 ರಂದು ಬೆಳಿಗ್ಗೆ 11.15ರ ಸುಮಾರಿಗೆ ಅವರು ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅವರ ಸೀರೆಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲೇ ಬೆಂಕಿ ದೇಹವನ್ನು ಆವರಿಸಿದೆ. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಮಾರ್ಚ್ 10 ರಂದು ಬೆಳಿಗ್ಗೆ 7.30 ಕ್ಕೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.