ಆ,16: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ತೀರಾ ಬಿಗಡಾಯಿಸಿರುವುದಾಗಿ ಅವರು ಚಿಕಿತ್ಸೆ ಪಡೆಯುತ್ತಿರುವ ದೆಹಲಿಯ ಏಮ್ಸ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ. ಮೂತ್ರದ ಸೋಂಕು ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಅವರು ಜೂನ್ 11ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಅವರ ಆರೋಗ್ಯ ಸ್ಥಿತಿ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹಿತ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.