ಸುಳ್ಯ, ಆ 16: ಹಬ್ಬಕ್ಕೆ ಬಟ್ಟೆ ಖರೀದಿಸುವ ವಿಚಾರಕ್ಕೆ ಸಂಬಂಧಿಸಿ ಪತಿ-ಪತ್ನಿಯರ ನಡುವೆ ಉಂಟಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಸುಳ್ಯದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯದ ಜ್ಯೋತಿ ಸರ್ಕಲ್ ಬಳಿಯ ಆಯಿಶಾ(21) ಕೊಲೆಯಾದ ಮಹಿಳೆ. ಪತಿ ಫಿರೋಜ್ ಹತ್ಯೆಗೈದ ಆರೋಪಿ. ಐದು ವರ್ಷಗಳ ಹಿಂದೆ ವಿವಾಹವಾಗಿದ್ದ ಈ ಜೋಡಿ ಅನ್ಯೋನ್ಯವಾಗಿತ್ತು. ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದ. ಇತ್ತಿಚೀಗೆ ಊರಿಗೆ ಬಂದಿದ್ದ. ಆದ್ರೆ ನಿನ್ನೆ ಅವರ ನಡುವೆ ಬಟ್ಟೆ ಖರೀದಿಸುವ ವಿಚಾರದಲ್ಲಿ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಚೂಡಿದಾರ ವೇಲ್ನಿಂದ ಆಯಿಷಾಳ ಕುತ್ತಿಗೆಗೆ ಬಿಗಿದು ಹತ್ಯೆಗೈದಿದ್ದಾನೆ ಎಂದು ಆರೋಪಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.