ಬೈಂದೂರು, ಮಾ.14 (DaijiworldNews/MB) : ಕಾರಿನಲ್ಲಿ ಗೋ ಮಾಂಸ ಸಾಗಿಸುತ್ತಿದ್ದ ಆರೋಪಿಗಳನ್ನು ಬೈಂದೂರು ಪೊಲೀಸರು ಇಬ್ಬರನ್ನು ಬೈಂದೂರು ಸಮೀಪದ ಶಿರೂರು ಚೆಕ್ ಪೋಸ್ಟ್ ಬಳಿ ಬಂಧಿಸಿದ್ದಾರೆ.


ಭಟ್ಕಳದ ಶೌಕತ್ ಅಲಿ ಸ್ಟ್ರೀಟ್ ನಿವಾಸಿ ಸೈಯದ್ ಮೊಸ್ಸಿನ್ ಲಂಕಾ (52), ಭಟ್ಕಳದ ಜಾಲಿ ಅಜಾದ್ ನಗರ ನಿವಾಸಿ ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಬಂಧಿತರು ಎಂದು ಗುರುತಿಸಲಾಗಿದೆ.
ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿಗಳು ಕಾರಿನಲ್ಲಿ ಮೀನು ತುಂಬುವ ಬಾಕ್ಸ್ ನಲ್ಲಿ ದನದ ಮಾಂಸ ತುಂಬಿಸಿಕೊಂಡು ಭಟ್ಕಳ ಕಡೆ ತೆರಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸ್ ಶೋಧದ ವೇಳೆ ಕಾರಿನಲ್ಲಿ ಮೂರು ಪ್ಲಾಸ್ಟಿಕ್ ಚೀಲಗಳಲ್ಲಿ 150 ಕೆ.ಜಿ ಮಾಂಸ ಪತ್ತೆಯಾಗಿದೆ. ವಶಕ್ಕೆ ಪಡೆದ ಮಾಂಸದ ಅಂದಾಜು ಮೌಲ್ಯ 40,000 ರೂ. ಆಗಿದೆ.
ಹಣ ಮಾಡುವ ಉದ್ದೇಶದಿಂದ ಜಾನುವಾರು ಕಳ್ಳತನ ಮಾಡಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ಶಂಕಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.