ಮಂಜೇಶ್ವರ, ಮಾ. 14 (DaijiworldNews/SM): ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.

ಅಭ್ಯರ್ಥಿ ಘೋಷಣೆ ಮೊದಲೇ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಪೈವಳಿಕೆ ನಗರ ಶಾಲಾ ಮೈದಾನದಲ್ಲಿ ಬಂದಿಳಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ . ಸುರೇಂದ್ರನ್ ರವರನ್ನು ಬಳಿಕ ವಾಹನಗಳ ಮೆರವಣಿಗೆ ಮೂಲಕ ಜೋಡುಕಲ್ಲಿನಲ್ಲಿ ಬಿಜೆಪಿ ಕ್ಷೇತ್ರ ಚುನಾವಣಾ ಪ್ರಚಾರ ಸಮಿತಿ ಕಚೇರಿಗೆ ಕರೆದೊಯ್ಯಲಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಉಪಸ್ಥಿತರಿದ್ದರು.
ಅಭ್ಯರ್ಥಿ ಘೋಷಣೆಯಾಗುವ ಮುನ್ನವೇ ಸುರೇಂದ್ರನ್ ಪ್ರಚಾರ ಕಾರ್ಯಕ್ಕೆ ಇಳಿದಿದ್ದು, ಅವರಿಗೆ ಟಿಕೆಟ್ ಖಚಿತ ಎನ್ನಲಾಗಿದೆ.