ಮಂಗಳೂರು, ಮಾ. 14 (DaijiworldNews/SM): ರವಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ 12 ಹೊಸ ಪ್ರಕರಣಗಳು ವರದಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ ಒಟ್ಟು 5,95,469 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 5,60,721 ಮಂದಿಯ ವರದಿ ನಕಾರಾತ್ಮಕವಾಗಿವೆ. ಜಿಲ್ಲೆಯಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 34,748 ಆಗಿದ್ದು, ಈ ಪೈಕಿ ಕೇವಲ 259 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.
ಆಸ್ಪತ್ರೆಗಳಿಂದ ಭಾನುವಾರ 31 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆಯನ್ನು 33,748 ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಕೊರೋನಾ ವೈರಸ್ನಿಂದ ಒಟ್ಟು 741 ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಜಿಲ್ಲಾ ಆರೋಗ್ಯ ಬುಲೆಟಿನ್ ಪ್ರಕಾರ, ಈವರೆಗೆ 3,84,567 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,60,737 ಮಂದಿಯ ವರದಿ ನಕಾರಾತ್ಮಕವಾಗಿವೆ. ರವಿವಾರ ಹನ್ನೆರಡು ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 23,830 ಕ್ಕೆ ತಲುಪಿದೆ. ಈ ಪೈಕಿ 71 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಆಸ್ಪತ್ರೆಗಳಿಂದ ಭಾನುವಾರ 19 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 23,569 ಕ್ಕೆ ತಲುಪಿದೆ. ಕೊರೊನಾವೈರಸ್ನಿಂದ ಜಿಲ್ಲೆಯಲ್ಲಿ ಇದುವರೆಗೆ 190 ಸಾವುಗಳು ಸಂಭವಿಸಿವೆ.