ಮಂಗಳೂರು, ಆ 18: ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಸಮಸ್ಯೆ ಎದುರಿಸುತ್ತಿರುವ ಜನರು ಸಂಕಷ್ಟದ ದೂರು, ಸಹಾಯ ಕೋರಿ ಬರುವ ಕರೆಗಳನ್ನು ಸ್ವೀಕರಿಸಲು ಜಿಲ್ಲಾಡಳಿತದಿಂದ ವಿಪತ್ತು ನಿರ್ವಹಣ ಕೋಶ ತೆರೆಯಲಾಗಿದೆ. ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿದೆ.
ಮೂರು ಪಾಳಿಗಳಲ್ಲಿ ಅಧಿಕಾರಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು ಗಾಳಿ ಮಳೆಯಿಂದ ಸಮಸ್ಯೆ ಉಂಟಾದಲ್ಲಿ ವಿಪತ್ತು ನಿರ್ವಹಣಾ ಕೋಶವನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ವಿಪತ್ತು ನಿರ್ವಹಣ ಕೊಠಡಿ ಸಹಾಯ ದೂರವಾಣಿ ಸಂಖ್ಯೆ: 1077ಗೆ ಸಂರ್ಪಕಿಸಬಹುದಾಗಿದೆ.